Home » ಸುಬ್ರಹ್ಮಣ್ಯ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಚಂದ್ರಶೇಖರ್ ನಂಗಾರು ಮೃತ್ಯು

ಸುಬ್ರಹ್ಮಣ್ಯ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಚಂದ್ರಶೇಖರ್ ನಂಗಾರು ಮೃತ್ಯು

by Praveen Chennavara
0 comments

ಸುಬ್ರಹ್ಮಣ್ಯ : ಹರಿಹರ ಪಲ್ಲತ್ತಡ್ಕದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್ ನಂಗಾರು (35) ಎಂಬವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಸೋಮವಾರ ಸಂಜೆ ತನ್ನ ಬೈಕ್ ನಲ್ಲಿ ಸ್ನೇಹಿತನೊಂದಿಗೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುತ್ತಿದ್ದಾಗ ಹರಿಹರ ಪಲ್ಲತಡ್ಕದ ಶಾಲಾ ಬಳಿ ಎದುರಿನಿಂದ ಬಂದ ಲಾರಿಯನ್ನು ನೋಡಿ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಬೈಕ್ ನ ಹಿಂಬದಿ ಸವಾರರಾಗಿ ಕುಳಿತಿದ್ದ ಚಂದ್ರಶೇಖರರು ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರ ಸಲಹೆಯ ಮೇರೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಂದ್ರಶೇಖರ ದೇಹದಲ್ಲಿ ಯಾವುದೇ ಚಲನ ವಲನ ಕಂಡು ಬಾರದಿದ್ದುದರಿಂದ ವೈದ್ಯರ ಸೂಚನೆಯ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

You may also like

Leave a Comment