1
ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಯುವಕರು ಅಮಾನವೀಯವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ.
ವಿಶಾಲ್ ಪಟಾಯತ್(27) ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ದುರ್ದೈವಿ.
ವಿಶಾಲ್ ಆಗಸ್ಟ್ 18ರಂದು ಕಂಟ್ರಿ ಸಾರಾಯಿಗಾಗಿ ಬೇರೆಯವರ ಮನೆ ಕದ ತಟ್ಟಿದ್ದಾನೆ. ಇದನ್ನು ಪ್ರಶ್ನೆ ಮಾಡಿದವರ ಜೊತೆ ಜಗಳವಾಡಿದ ವಿಶಾಲ್ ಮೂವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವಿಚಾರ ತಿಳಿದ ಗ್ರಾಮದ ಯುವಕರ ತಂಡ ವಿಶಾಲ್ ಮೇಲೆ ಪ್ರತಿ ದಾಳಿ ನಡೆಸಿದ್ದು, ಕೈಕಾಲು ಕಟ್ಟಿಹಾಕಿ ಮನಬಂದಂತೆ ಹಲ್ಲೆ ನಡೆಸಿದ್ದು, ಗ್ರಾಮದ ಸುತ್ತಲೂ ಮೆರವಣೆಗೆ ಮಾಡಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿಶಾಲ್ ನಿನ್ನೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಮಾನವೀಯ ಘಟನೆ ನಡೆದರೂ ಮಾಳಮಾರುತಿ ಠಾಣೆ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳದ ಆರೋಪ ಕೇಳಿಬಂದಿದೆ.
