Home » ಸೆ.2 : ಮಂಗಳೂರಿನಲ್ಲಿ ಶಾಲಾ,ಕಾಲೇಜಿಗೆ ರಜೆ

ಸೆ.2 : ಮಂಗಳೂರಿನಲ್ಲಿ ಶಾಲಾ,ಕಾಲೇಜಿಗೆ ರಜೆ

0 comments

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ,ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ: 02-09-2022 ರಂದು ರಜೆಯನ್ನು ಘೋಷಿಸಿ ಆದೇಶಿಸಿದೆ. ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

You may also like

Leave a Comment