Home » ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0 comments

ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಯುವಕನೋರ್ವವನ್ನು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರಯವ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ತನ್ನ ಹುಟ್ಟುಹಬ್ಬವನ್ನು ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆಯೊಂದು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವಿನಾಯಕ ಸೋಮಶೇಖರ ಹೋರಕೇರಿ (28) ಎಂದು ಗುರುತಿಸಲಾಗಿದೆ.

ಯುವಕ ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್ಐ ಬಿ.ವಿ.ನಾಮ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಸತೀಶ್ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಈ ಯುವಕ ನಾಡಪಿಸ್ತೂಲಿನಿಂದ ಫೈರಿಂಗ್ ಮಾಡಿ ಪರಾರಿಯಾಗಿದ್ದನಂತೆ. ಇದಾಗಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You may also like

Leave a Comment