Home » ಶಾಲಾ ಪ್ರಾಚಾರ್ಯ ಮತ್ತು ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಆರೋಪ!!ಪೋಷಕರಿಂದ ಹಿಗ್ಗಾಮುಗ್ಗಾ ಥಳಿತ-ಇಬ್ಬರು ವಶಕ್ಕೆ

ಶಾಲಾ ಪ್ರಾಚಾರ್ಯ ಮತ್ತು ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಆರೋಪ!!ಪೋಷಕರಿಂದ ಹಿಗ್ಗಾಮುಗ್ಗಾ ಥಳಿತ-ಇಬ್ಬರು ವಶಕ್ಕೆ

0 comments

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಯೊಂದರ ಪ್ರಾಚಾರ್ಯರು ಮತ್ತು ಕಂಪ್ಯೂಟರ್ ಆಪರೇಟರ್ ಸೇರಿಕೊಂಡು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಆರೋಪದ ಬೆನ್ನಲ್ಲೇ ಶಾಲೆಗೆ ಎಂಟ್ರಿ ಕೊಟ್ಟ ಪೋಷಕರು ಮನಬಂದಂತೆ ಥಳಿಸಿದ ಘಟನೆಯು ಕಲಬುರಗಿಯಲ್ಲಿ ನಡೆದಿದೆ.

ಇಲ್ಲಿನ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಾಚಾರ್ಯರು ಮತ್ತು ಕಂಪ್ಯೂಟರ್ ಸಿಬ್ಬಂದಿಯೋರ್ವ ವಸತಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುವುದಲ್ಲದೇ, ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಘಟನೆ ಬಗ್ಗೆ ರೊಚ್ಚಿಗೆದ್ದ ಪೋಷಕರ ಸಹಿತ ಗ್ರಾಮಸ್ಥರು ಶಾಲೆಗೆ ಭೇಟಿ ನೀಡಿದ್ದು, ಶಾಲೆಯಲ್ಲೇ ಪ್ರಾಚಾರ್ಯರು ಮತ್ತು ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಶೀಘ್ರ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸುವಂತೆ ಆಗ್ರಹವಾಗಿದೆ.

You may also like

Leave a Comment