Home » ಕಾರ್ಕಳ : ಬಿಜೆಪಿ ಗ್ರಾ.ಪಂ.ಸದಸ್ಯ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಕಾರ್ಕಳ : ಬಿಜೆಪಿ ಗ್ರಾ.ಪಂ.ಸದಸ್ಯ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

0 comments

ಕಾರ್ಕಳ : ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಳ್ಳಾರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63).

ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ತಿಳಿದು ಬಂದಿದೆ.

ಮೃತರು ಕೃಷಿ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದು, ದುರ್ಗಾ ಪಂಚಾಯತ್ ನ ಸದಸ್ಯರಾಗಿದ್ದರು. ಆದರೆ, ಇವರ ಈ ನಿರ್ಧಾರಕ್ಕೆ ಕಾರಣ ಏನೆಂಬುದು ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.

You may also like

Leave a Comment