ಬೆಂಗಳೂರು: SDPI ಮತ್ತು PFI ಬ್ಯಾನ್ ಸನ್ನಿಹಿತವಾಗಿದೆಯೇ ? ಅಂತಹದೊಂದು ಸುದ್ದಿ ಈಗ ಬಂದಿದೆ. ಕರ್ನಾಟಕದ ಗೃಹ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. SDPI ಮತ್ತು PFI ತಲೆಯಮೇಲೆ ಮೇಲೆ ನಿಷೇಧದ ಹರಿತ ಕತ್ತಿ ತೂಗು ಹಾಕಲಾಗಿದೆ.
ರಾಷ್ಟ್ರೀಯ ತನಿಖಾ ದಳ (NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಈಗ ಪ್ರತಿಕ್ರಿಯೆ ನೀಡಿದ್ದಾರೆ.
SDPI ಮತ್ತು PFI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದವರು ಹೇಳಿದರು. ನಾವು ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ ಎಂದು ಹೇಳಿದ್ದಾರೆ. ದೇಶವ್ಯಾಪಿ ಈ ದಾಳಿ ನಡೆಯುತ್ತಿದ್ದು, ಈಗ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
