Home » ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

0 comments

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆ ಅನುಷ್ಠಾನಗೊಳಿಸಿ, ಸಾಲ ಸೌಲಭ್ಯ ಇನ್ನಿತರ ಮಹತ್ವದ ಮೂಲಕ ಜನರಿಗೆ ನೆರವಾಗುತ್ತಿದೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ಸೇವಾಸಿಂಧು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೇ ಇರುವವರಿಗಾಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಕರಿಸಲು ಪ್ರತಿ ತಿಂಗಳಿಗೆ ಶೈಕ್ಷಣಿಕ ಅವಧಿಯಲ್ಲಿ 1,500ರಂತೆ, 10 ತಿಂಗಳಿಗೆ ರೂ.15000 ಗಳನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಜಮಾ ಮಾಡಲಾಗುತ್ತದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಗಳನ್ನು ಅಕ್ಟೋಬರ್ 20 ರವರೆಗೆ ಸೇವಾಸಿಂಧು ಆನ್‍ಲೈನ್ ಮೂಲಕ https://sevasindu.Karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಸಲ್ಲಿಸಿದ ಹಾರ್ಡ್‍ಕಾಫಿಯನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ :216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110 ರವರಿಗೆ ಸಲ್ಲಿಸಬೇಕು.

‘ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ,ಇಲ್ಲವೇ ‘ವಿದ್ಯಾಸಿರಿ’ ಊಟ ಮತ್ತು ವಸತಿ ಸಹಾಯ ಯೋಜನೆಯಲ್ಲಿ ಯಾವುದಾದರೂ ಒಂದು ಸೌಲಭ್ಯ ದೊರೆಯುತ್ತದೆ.

ಅರ್ಜಿ ಸಲ್ಲಿಸುವವರು ಭಾರತದ ಪ್ರಜೆಯಾಗಿದ್ದು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಜೊತೆಗೆ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಟ್ಟ ಸರ್ಕಾರಿ/ಸ್ಥಳೀಯ ಸಂಸ್ಥೆ, ಅನುದಾನಿತ ಸಂಸ್ಥೆಗಳು, ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
ವಿದ್ಯಾಸಿರಿ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ, ಇಲ್ಲವೇ ಪೋಷಕರ ಕುಂಟುಂಬದ ಒಟ್ಟು ಆದಾಯ ಪ್ರವರ್ಗ-1 ಕ್ಕೆ 2,530ಲಕ್ಷ ವಾರ್ಷಿಕ ಮತ್ತು 2ಎ, 2ಬಿ ಮತ್ತು 3ಬಿಗೆ 2.00 ಲಕ್ಷ ರೂ. ಮೀರಿರಬಾರದು. ಇದಲ್ಲದೆ, ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ಈ ಯೋಜನೆಯಡಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯುವವರು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆ/ಸೆಮಿಸ್ಟಿರ್ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು/ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿರಬೇಕು. ಇದಲ್ಲದೆ, ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಈ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ ಎಂಬುದನ್ನು ಗಮನಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ / ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು ಮತ್ತು ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ :216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110 ಅಥವಾ ಇಲಾಖೆ ಸಹಾಯವಾಣಿ ಸಂಖ್ಯೆ: 8277799990 ಮತ್ತು ಕಛೇರಿಯ ದೂರವಾಣಿ ಸಂಖ್ಯೆ: 080-29787455, 080-27627444, 080-27725445, 080-27682882, 080-27931899 ಅನ್ನು ಸಂಪರ್ಕಿಸಬಹುದಾಗಿದೆ.

You may also like

Leave a Comment