Home » ಪ್ರವೀಣ್ ನೆಟ್ಟಾರು ಹತ್ಯೆ : ಪಿಎಫ್‌ಐ ನಡೆಸಿದ ಕೊಲೆ !

ಪ್ರವೀಣ್ ನೆಟ್ಟಾರು ಹತ್ಯೆ : ಪಿಎಫ್‌ಐ ನಡೆಸಿದ ಕೊಲೆ !

by Praveen Chennavara
0 comments

ಬೆಂಗಳೂರು: ಪಿಎಫ್ಐ ನಿಷೇಧದ ಆದೇಶ ಪತ್ರದಲ್ಲಿ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸ್ಪಷ್ಟವಾಗಿ ಉಲ್ಲೇಖವಾಗಿದ್ದು, ಇದು ಪಿಎಫ್ಐ ನಡೆಸಿದ ಕೊಲೆ ಎಂದು ಉಲ್ಲೇಖಿಸಲಾಗಿದೆ.

ಪಿಎಫ್ಐ ನಿಷೇಧಕ್ಕೆ ಅಗತ್ಯವಾದ ಕಾರಣಗಳನ್ನು ಗೆಜೆಟ್ ನಲ್ಲಿ ಉಲ್ಲೇಖಿಸಿರುವ ಕೇಂದ್ರ ಗೃಹ ಇಲಾಖೆ ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ನಡೆದ ಹಲವು ಕೊಲೆ ಪ್ರಕರಣಗಳಲ್ಲಿ ಪಿಎಫ್ ಐ ಭಾಗಿಯಾಗಿತ್ತು ಎಂದು ಉಲ್ಲೇಖಿಸಿದೆ.

2016 ರಲ್ಲಿ ಕರ್ನಾಟಕದಲ್ಲಿ ನಡೆದ ರುದ್ರೇಶ್, ಪ್ರವೀಣ್ ಹಾಗೂ ಶರತ್ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಭಾಗಿಯಾಗಿದ್ದರು. 2022ರಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊನೆಯಲ್ಲಿ ಇದೇ ಸಂಘಟನೆ ಕಾರ್ಯಕರ್ತರ ಪಾತ್ರ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

You may also like

Leave a Comment