ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಮಾಡುವ ಕುರಿತಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ ನೀಡಲಾಗಿದೆ.ಮಾನ್ಯತೆ ಅಥವಾ ನವೀಕರಣಕ್ಕಾಗಿ ಸಲ್ಲಿಸಿದ ಅರ್ಜಿಗಳು ಈಗಾಗಲೇ ತಿರಸ್ಕೃತವಾಗಿರುವ ಇಲ್ಲವೇ ಕಾರಣಾಂತರಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 29 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದರ ಜೊತೆಗೆ ಸುರಕ್ಷತಾ ಪ್ರಮಾಣ ಪತ್ರವನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸಲು ಸಾಧ್ಯವಾಗದೇ ಇರುವ ಶಾಲೆಗಳು ಸಹ ಅಫಿಡವಿಟ್ ಅನ್ನು ಸಲ್ಲಿಸಬಹುದಾಗಿದೆ. ಹೀಗೆ ಸಲ್ಲಿಕೆಯಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ನವೆಂಬರ್ 25 ರೊಳಗೆ ಕ್ರಮಪ್ರಕಾರ ವಾಗಿ ಹಾಗೂ ಹಂತ ಹಂತವಾಗಿ ಇತ್ಯರ್ಥ ಮಾಡಬೇಕಾಗಿದ್ದು, ಇಲ್ಲದೆ ಹೋದರೆ, ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
