Home » ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿ ಆತ್ಮಹತ್ಯೆ | ವಿಚ್ಚೇದಿತ ಪತಿಯಲ್ಲಿ ಕ್ಷಮೆ ಕೋರಿದ ಡೆತ್‌ನೋಟ್ ಪತ್ತೆ

ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿ ಆತ್ಮಹತ್ಯೆ | ವಿಚ್ಚೇದಿತ ಪತಿಯಲ್ಲಿ ಕ್ಷಮೆ ಕೋರಿದ ಡೆತ್‌ನೋಟ್ ಪತ್ತೆ

by Praveen Chennavara
0 comments

ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.

ಎಫ್‌ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್‌ನೋಟ್ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment