Home » ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ

ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ

by Praveen Chennavara
0 comments

ಮಂಗಳೂರು ಅ 14 :ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ ಎಂಬಲ್ಲಿ ಅ 13 ರಂದು ತಡ ರಾತ್ರಿ ನಡೆದಿದ್ದೆ. ಈ ಬಗ್ಗೆ ಹರೀಶ್ ಪೂಂಜಾರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ, ಹರೀಶ್ ಪೂಂಜಾರವರು ಬೆಳ್ತಂಗಡಿಗೆ ಕಾರಿನಲ್ಲಿ ಹಿಂತಿರುಗಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಮೊದಲು ಶಾಸಕರ ಕಾರನ್ನು ದುಷ್ಕರ್ಮಿಯು ಬಿಳಿ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾನೆ. ಶಾಸಕರಿದ್ದ ಕಾರು ಫರಂಗಿ ಪೇಟೆಯ ಮೀನು ಮಾರುಕಟ್ಟೆ ಬಳಿ ತಲುಪುತ್ತಲೇ, ದುಷ್ಕರ್ಮಿ ತನ್ನ ಕಾರನ್ನು ಅದಕ್ಕೆ ಅಡ್ಡ ನಿಲ್ಲಿಸಿ ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬೈದು ತನ್ನ ಕೈಯಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

You may also like

Leave a Comment