Home » ಅಡಿಕೆಗೆ ಹಳದಿ ರೋಗ ತಜ್ಞರ ಸಮಿತಿ ರಚನೆ : ಕೇಂದ್ರ ಸರಕಾರ ಆದೇಶ

ಅಡಿಕೆಗೆ ಹಳದಿ ರೋಗ ತಜ್ಞರ ಸಮಿತಿ ರಚನೆ : ಕೇಂದ್ರ ಸರಕಾರ ಆದೇಶ

by Praveen Chennavara
0 comments

ನವದೆಹಲಿ : ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ.

You may also like

Leave a Comment