Home » ಪುನೀತ್‌ ಪರ್ವʼ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ

ಪುನೀತ್‌ ಪರ್ವʼ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ

0 comments

ಬೆಂಗಳೂರು : ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸವಿ ನೆನಪಿನಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಎನ್ನುವ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ತಮ್ಮ ಮನೆಯಲ್ಲಿ ಟಿವಿಯಲ್ಲಿ ವೀಕ್ಷಣೆ ಮಾಡುತ್ತ ದೇವರಂಥ ಮನುಷ್ಯ ಎಂದು ಕಣ್ಣೀರಿಟ್ಟಿ ಅಭಿಮಾನಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಮಲ್ಲೇಶ್ವರಂನ ರಿಂಗ್ ರೋಡ್ ನಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಮನೆಯಲ್ಲಿ ಪುನೀತ ಪರ್ವ ಕಾರ್ಯಕ್ರಮ ನೋಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ. ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರಿನಲ್ಲಿ ಬೆಂಗಳೂರಿನ ಅರೆಮನೆ ಮೈದಾನದಲ್ಲಿ ನಿನ್ನೆ ಅದ್ಧೂರಿ ಕಾರ್ಯಕ್ರಮ ನಡೆದಿದೆ.ಈ ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಟ್ಟಿದ್ದು, ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳಿಂದ ಸ್ಟಾರ್‌ ನಟರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಅಪ್ಪು ಅವರ ಗುಣಗಾಯನ ನಡೆದಿದೆ. ಈ ವೇಳೆ ಅಪ್ಪು ನೆನದು ಭಾವುಕರಾಗಿದ್ದರು.

You may also like

Leave a Comment