ಸರಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗವಕಾಶವಿದ್ದು, ಖಾಲಿರುವ ಫೀಲ್ಡ್ ವರ್ಕರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಶ್ವವಿದ್ಯಾಲಯದ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS ಧಾರವಾಡ)
ಹುದ್ದೆಗಳ ಸಂಖ್ಯೆ : 01
ಉದ್ಯೋಗ ಸ್ಥಳ : ಶಿರಸಿ – ಕರ್ನಾಟಕ
ಹುದ್ದೆಯ ಹೆಸರು : ಫೀಲ್ಡ್ ವರ್ಕರ್
ವೇತನ : ರೂ.18000/- ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ :
ಯುಎಎಸ್ ಧಾರವಾಡದಲ್ಲಿ ಖಾಲಿರುವ ಹುದ್ದೆಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಅರಣ್ಯ, ತೋಟಗಾರಿಕೆ, ಕೃಷಿಯಲ್ಲಿ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ ವಿಧಾನ :
ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ ನವೆಂಬರ್ 04, 2022 ಬೆಳಿಗ್ಗೆ 10:30ಕ್ಕೆ ಸರಿಯಾಗಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಿರಬೇಕಾಗಿದೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 20-10-2022
ವಾಕ್-ಇನ್ ಸಂದರ್ಶನ ದಿನಾಂಕ : 04-11-2022 10:30 AM
ಅಧಿಕೃತ ವೆಬ್ಸೈಟ್: uasd.edu
