5
ಕಡಬ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನ.3ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು.
ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
