Home » ಮಂಗಳೂರು : ನ.28 ರಿಂದ ನ.29 ರ ವರೆಗೆ ಮದ್ಯ ಮಾರಾಟ ಬಂದ್!

ಮಂಗಳೂರು : ನ.28 ರಿಂದ ನ.29 ರ ವರೆಗೆ ಮದ್ಯ ಮಾರಾಟ ಬಂದ್!

0 comments

ಇನ್ನೇನೂ ಕೆಲವೇ ದಿನಗಳಲ್ಲಿ ಧಾರ್ಮಿಕ ಐತಿಹ್ಯ ಉಳ್ಳ ಹಾಗೂ ಐತಿಹಾಸಿಕ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ನಡೆಯುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಾಗಾಗಿ, ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜೊತೆಗೆ ಸಾರ್ವಜನಿಕರ ಹಿತ ದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ.

ಆದೇಶದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾ ಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋ ರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋ ರೆಂಟ್‍ಗಳನ್ನು ಇದೇ ನ.28ರ ಬೆಳಿಗ್ಗೆ 6 ಗಂಟೆಯಿಂದ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಆದೇಶದಲ್ಲಿ ಸೂಚನೆಯಲ್ಲಿ ತಿಳಿಸಲಾಗಿದೆ.

You may also like

Leave a Comment