ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ.
“ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ” ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ತಿಳಿಸಿದರು.
ವರದಿಗಳ ಪ್ರಕಾರ, ಭೂಕಂಪದ ತೀವ್ರತೆ 5.6 ರಿಕ್ಟರ್ ಮಾಪಕದಲ್ಲಿತ್ತು. ಭೂಕಂಪವು ಎಷ್ಟು ಪ್ರಬಲವಾಗಿದೆಯೆಂದ್ರೆ, ಜನರು ಅಪಾರ್ಟ್ಮೆಂಟ್‍ಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ತಿಳಿಸಿದೆ.
Moderately strong #Earthquake in Jakarta, Indonesia just occurred few minutes ago.
High rise buildings in South Jakarta seen evacuating. No damages to buildings seen so far.. pic.twitter.com/Aec85R1qkG