ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಡಿ.13ರವರೆಗೂ ಧಾರಕಾರ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ಮೇಲೆ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದ್ದೂ, ಭಾರಿ ಮಳೆ ಸುರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಳಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದ್ದು, 3 ದಿನಗಳ ಪೈಕಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
