Home » ಹಾಡಹಗಲೇ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ‌| ಆರೋಪಿಗಳು ಪರಾರಿ

ಹಾಡಹಗಲೇ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ‌| ಆರೋಪಿಗಳು ಪರಾರಿ

0 comments

ಕಲಬುರಗಿ: ನಗರದ ನೂರ್ ಬಾಗ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಹರಿದಿದೆ. ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಕಮರ್ ಕಾಲೋನಿಯ ನಿವಾಸಿ ಇತೇಷಾಮ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಗಾಯಾಳುವನ್ನು ಮಣ್ಣೂರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಈತ ವ್ಯಾಸಂಗ ಮಾಡುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

You may also like

Leave a Comment