Home » ಸರಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್!

ಸರಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್!

0 comments

ಸರಕಾರಿ ಉದ್ಯೋಗಕ್ಕಾಗಿ ಕಾದು ಕೂತವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್ ದೊರೆತಿದ್ದು, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಹೇಳಲಾಗಿದೆ.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎಸ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಉದ್ಯೋಗ ಮಾಹಿತಿ ಕುರಿತು ತಿಳಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

5.11 ಲಕ್ಷ ಹುದ್ದೆಗಳು ಭರ್ತಿಯಾಗಿದ್ದು, ಖಾಲಿ ಇರುವ ಹುದ್ದೆಗಳಲ್ಲಿ ಸಿ ಮತ್ತು ಡಿ ವೃಂದದ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ವರ್ತಿ ಮಾಡಲಾಗಿದೆ. ಸುಮಾರು 82,700 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದ್ದು, 7.60 ಲಕ್ಷ ಹುದ್ದೆ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.

You may also like

Leave a Comment