Home » Indian Railway Recruitment 2023: ನೀವು 10ನೇ ತರಗತಿ ಪಾಸಾಗಿದ್ದೀರಾ ? ಹಾಗಾದರೆ ಇಲ್ಲಿದೆ ನಿಮಗೆ ಸುವರ್ಣವಕಾಶ, 1785 ಹುದ್ದೆಗಳ ನೇಮಕಾತಿ

Indian Railway Recruitment 2023: ನೀವು 10ನೇ ತರಗತಿ ಪಾಸಾಗಿದ್ದೀರಾ ? ಹಾಗಾದರೆ ಇಲ್ಲಿದೆ ನಿಮಗೆ ಸುವರ್ಣವಕಾಶ, 1785 ಹುದ್ದೆಗಳ ನೇಮಕಾತಿ

by Mallika
0 comments

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcser.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 1785

ಪ್ರಮುಖ ದಿನಾಂಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 2, 2023

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೆಯೇ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.

ಅರ್ಜಿ ಶುಲ್ಕ:ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಕನಿಷ್ಠ 50% (ಒಟ್ಟು) ಅಂಕಗಳೊಂದಿಗೆ ಮೆಟ್ರಿಕ್ಯುಲೇಶನ್‌ನಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಈ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

You may also like

Leave a Comment