Home » ಗುಂಡು ಹಾರಿಸಿ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

ಗುಂಡು ಹಾರಿಸಿ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

0 comments

ರಾಮನಗರ: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್‌ ಸಿಕ್ಕಿದ್ದು, ಇದೀಗ  ಮಾಜಿ ಸಚಿವ ಅರವಿಂದ ಲಿಂಬಾವಳಿ  ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ಕಾರಿನಲ್ಲಿಯೇ  ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ  ಮಾಡಿಕೊಂಡ ಉದ್ಯಮಿ  ಪ್ರದೀಪ್ ಡೆತ್ ನೋಟ್‌ನಲ್ಲಿ ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ  ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳೆಲ್ಲರಿಗೂ ನೋಟಿಸ್ ನೀಡಿ ಪೊಲೀಸರು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೇ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್‌ಗೆ ವಾಪಸ್ ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ರೂ. ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು.

ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹಾಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಕೂಡಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

You may also like

Leave a Comment