5
ಯುವ ದೇಹದಾರ್ಡ್ಯ ಪಟುವೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ನಡೆದಿದೆ.
ಬೆಂಗಳೂರಿನ ಕೆ.ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀನಾಥ್ ಎಂಬ ಯುವಕನೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದೇಹದಾರ್ಡ್ಯ ಪಟು.
ಮೃತ ಯುವಕ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದು, ಇದರ ಜೊತೆಗೆ ದೇಹದಾರ್ಡ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದ. ನಿನ್ನೆ ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶ್ರೀನಾಥ್, ಮೂಲತಃ ಕೋಲಾರದ ಶ್ರೀನಿವಾಸಪುರದವರು.
ಶ್ರೀನಾಥ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
