9
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಹ ನೀಡುವ ನಿಟ್ಟಿನಲ್ಲಿ ಹಲವು ಸಂಸ್ಥೆಗಳು ಪ್ರೋತ್ಸಾಹಧನವನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೌದು. ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 8, 2023 ರಂದು ಸಂಜೆ 5 ಗಂಟೆಯೊಳಗಾಗಿ ವೆಬ್ ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪದವಿ ಪಾಸಾದ ಹಾಗೂ ಉನ್ನತ ಪದವಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ)ಗೆ ಸೇರಿದ ಮತ್ತು ಶೇ,70 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅರ್ಹ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಕ್ಕೆ ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗೆ :
ಇಲಾಖೆಯ ವೆಬ್ಸೈಟ್ : https://bcwd.karnataka.gov.in
ಸಹಾಯವಾಣಿ ಸಂಖ್ಯೆ : 8050770004
