Home » ಮಂಗಳೂರು : ಸರಕಾರಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ, ಮಗು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಮಂಗಳೂರು : ಸರಕಾರಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ, ಮಗು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

0 comments

ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಈ ಅಪಘಾತ ಮಧ್ಯಾಹ್ನ ಸಂಭವಿಸಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರ ಗಾಯಗೊಂಡವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment