4
ಉಡುಪಿ : ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಡುಬಿದ್ರಿಯ ಅಪಘಾತವಲಯವಾಗಿ ಗುರುತಿಸಲ್ಪಟ್ಟಿರುವ ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಈ ಅವಘಡವು ಸಂಭವಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
