Home » ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ನಾಲ್ವರ ಬಂಧನ

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ನಾಲ್ವರ ಬಂಧನ

0 comments

ಉಡುಪಿ: ಕೆಲ ದಿನಗಳ ಹಿಂದೆ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುರತ್ಕಲ್ ಕುಳಾಯಿಯ ದಿನೇಶ್ ಶೆಟ್ಟಿ (20), ಲಿಖಿತ್ ಕುಲಾಲ್ (21), ಆಕಾಶ್ ಕರ್ಕೇರ(24), ಪ್ರಸನ್ನ ಶೆಟ್ಟಿ (40) ಗುರುತಿಸಲಾಗಿದೆ.

ಬಂಧಿತರಲ್ಲಿ ದಿನೇಶ್ ಮತ್ತು ಲಿಖಿತ್‌ ಎಂಬವರನ್ನು ಮಂಗಳವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕಾಶ್ ಮತ್ತು ಪ್ರಸನ್ನ ಶೆಟ್ಟಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಕಟಪಾಡಿಯ ಯೋಗೀಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗೀಶ್ ಮತ್ತು ಕೃತ್ಯಕ್ಕೆ ಸಹಕರಿಸಿದ ಮುಕೇಶ್ ಹಾಗೂ ಇತರ ಆರೋಪಿಗಳ ಶೋಧ ಕಾರ್ಯ ಮುಂದುವರೆಸಲಾಗಿದೆ.

You may also like

Leave a Comment