Home » 2nd Puc Practical Exam 2023 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

2nd Puc Practical Exam 2023 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

0 comments
2nd PUC students

2nd PUC Practical Exam: ದ್ವಿತೀಯ ಪಿಯು (Second Puc) ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಫೆಬ್ರವರಿ 2023ರ ದ್ವಿತೀಯ ಪಿಯುಸಿ ( Second Puc ) ಪ್ರಾಯೋಗಿಕ ಪರೀಕ್ಷೆಗೆ ಅರ್ಹರಿದ್ದು, ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ.

ದಿನಾಂಕ 06-02-2023 ರಿಂದ 28-02-2023ರ ವರೆಗೆ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು (2nd PUC Practical Exam)ನಡೆಸಲಾಗುತ್ತಿದೆ. ಈ ಪ್ರಾಯೋಗಿಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಪಡೆದುಕೊಂಡು ನೈಜಕಾರಣಗಳಿದ್ದು ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ಅರ್ಹ ವಿದ್ಯಾರ್ಥಿಗಳಿಗೆ, ಈಗಾಗಲೇ ಜಿಲ್ಲಾ ಉಪನಿರ್ದೇಶಕರುಗಳು, ತಮ್ಮ ಹಂತದಲ್ಲಿ ನಿಗದಿ ಮಾಡಲಾಗಿದೆ. ದಿನಾಂಕದ 20-02-2023 ರಿಂದ 28-02-2023 ರೊಳಗೆ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಕರುಗಳನ್ನು ನೇಮಿಸಿ ಪೂರಕ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ:
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ(KARNATAKA SCHOOL EXAMINATION AND ASSESSMENT BOARD) ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರ ವರೆಗೆ ನಡೆಸಲು ದಿನಾಂಕವನ್ನು ನಿಗದಿಮಾಡಲಾಗಿದೆ.

ದಿನಾಂಕ – 09-03-2023 – ಕನ್ನಡ, ಅರೇಬಿಕ್
ದಿನಾಂಕ – 11-03-2023- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ದಿನಾಂಕ – 13-03-2023- ಅರ್ಥಶಾಸ್ತ್ರ
ದಿನಾಂಕ – 14-03-2023 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ- 15-03-2023- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್
ದಿನಾಂಕ – 16-03-2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ – 17-03-2023- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ ವೆಲ್ನೆಸ್ ದಿನಾಂಕ – 18-03-2023- ಭೂಗೋಳಶಾಸ್ತ್ರ, ಜೀವಶಾಸ್ತ್ರ ದಿನಾಂಕ – 20-03-2023- ಇತಿಹಾಸ, ಭೌತಶಾಸ್ತ್ರ
ದಿನಾಂಕ – 21-03-2023- ಹಿಂದಿ
ದಿನಾಂಕ – 23-03-2023- ಇಂಗ್ಲಿಷ್
ದಿನಾಂಕ – 25-03-2023- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ – 27-03-2023- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ – 29-03-2023- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಪ್ರತಿದಿನ ಒಂದು ವಿಷಯಕ್ಕೆ ಸಂಬಂಧಿಸಿದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15 ರಿಂದ ಮಧ್ಯಾಹ್ನ 01-30 ರವೆರೆಗೆ ಪರೀಕ್ಷೆ ನಡೆಯಲಿವೆ. ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದ ವಿದ್ಯಾರ್ಥಿಗಳ ಭರ್ತಿ ಮಾಡಿದ ಮ್ಯಾನ್ಯುಯಲ್ ಅಂಕಪಟ್ಟಿಗಳನ್ನು ಪರೀಕ್ಷಾ ಕೇಂದ್ರಗಳಿಂದ ಸ್ವೀಕರಿಸಿ ಪ್ರಾಯೋಗಿಕ ಪರೀಕ್ಷೆ ಮುಗಿದ ಬಳಿಕ ಜಂಟಿ ನಿರ್ದೇಶಕರು (ಪರೀಕ್ಷೆ), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಗೆ ಖುದ್ದಾಗಿ ಸಲ್ಲಿಸಲು ಆದೇಶ ಹೊರಡಿಸಲಾಗಿದೆ.

ಈ ವೇಳಾಪಟ್ಟಿಯನ್ನು ಹೊರತುಪಡಿಸಿ ಈ ಹಿಂದೆ ಹೊರಡಿಸಿದ ವೇಳಾಪಟ್ಟಿಯಲ್ಲಿ ಬದಲಾವಣೆಗೆ ಅವಕಾಶ ಕಲ್ಪಿಸದಂತೆ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ( KARNATAKA SCHOOL EXAMINATION AND ASSESSMENT BOARD)ಸೂಚನೆ ನೀಡಿದೆ.

You may also like

Leave a Comment