Home » ರಾಜ್ಯದಲ್ಲಿ 5 ‍ಹಾಗೂ ‍8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ರದ್ದು: ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದಲ್ಲಿ 5 ‍ಹಾಗೂ ‍8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ರದ್ದು: ಹೈಕೋರ್ಟ್ ಮಹತ್ವದ ಆದೇಶ

0 comments

5th 8th Public exam :ಬೆಂಗಳೂರು : ರಾಜ್ಯದ 5ನೇ ತರಗತಿ, 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ (5th 8th Public exam) ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೊಸ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆ ಮಾಡುವ ದೃಷ್ಟಿಯಿಂದ 2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧಾರಿತ್ತು. ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದಲ್ಲದೇ ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು, ಹೀಗಾಗಿ ಶಾಲೆಗಳಲ್ಲಿ ಹಾಗೂ ಮನೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರೀ ಒತ್ತಡ ಹಾಕಲಾಗುತ್ತಿತ್ತು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿರುವುದರಿಂದ ಭಾರೀ ಗೊಂದಲ ಒಳಗಾದ ಪೋಷಕರು ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಂತಾಗಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೊಸ ಆದೇಶಕ್ಕೆ ಹೊರಡಿಸಿದ್ದಕ್ಕೆ ರಾಜ್ಯದೆಲ್ಲೆಡೆ ಭಾರೀ ಬೆಂಬಲ ಸೂಚಿಸುವುದಲ್ಲದೇ ಸಂತಸ ವ್ಯಕ್ತಪಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಒತ್ತಡಕ್ಕೆ ಒಳಗಾದ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿದಂತೂ ಸತ್ಯ

You may also like

Leave a Comment