SSLC Annual Exam-2023: 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯು (SSLC Annual Exam-2023) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಈ ಬಾರಿ ಈ ರೀತಿ ಮಾಡಲಾಗಿದೆ.
ಪರೀಕ್ಷೆ ಕುರಿತು ಇಲಾಖೆ ಸೂಚನೆ ನೀಡಿದ್ದು, ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಬೇಕು. ಒಂದು ವೇಳೆ, ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯಬೇಕೆಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿಗೆ ಮಾಹಿತಿ ನೀಡಿ, ಅವರು ಮುಂದೆ ಸ್ಟ್ರಾಂಗ್ ರೂಮ್ ತೆರೆಯಬೇಕು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯ ಹಾನಿ ಆಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದಿದೆ.
ಅಲ್ಲದೆ, ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು. ಹಾಗೆಯೇ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಬಿಟ್ಟು ಬೇರೆ ಯಾರೂ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ನಕಲು ಹಾಗೂ ಇತರೆ ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಬೇಕು. ಎಂದು ಇಲಾಖೆ ತಿಳಿಸಿದೆ.
ಹಾಗೆಯೇ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC exam) ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ (students) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಕೆಎಸ್ಆರ್ಟಿಸಿ (KSRTC) ಕಲ್ಪಿಸಿದೆ. ಜೊತೆಗೆ ಬಸ್ ಸಂಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ. ಹಾಗೆಯೇ ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ (SSLC Students) ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಬಸ್ ಪ್ರಯಾಣದ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಮಾರ್ಚ್ / ಏಪ್ರಿಲ್ 2023ರ ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ :
31-03-2023 – ಪ್ರಥಮ ಭಾಷೆ
03-04-2023 -ಗಣಿತ ಶಾಸ್ತ್ರ
06-04-2023- ದ್ವಿತೀಯ ಭಾಷೆ
10-04-2023- ವಿಜ್ಞಾನ
12-04-2023- ತೃತೀಯ ಭಾಷೆ
15-04-2023 – ಸಮಾಜ ವಿಜ್ಞಾನ
ಇದನ್ನೂ ಓದಿ: Dog : ನಾಯಿ ಸಾಕುವವರಿಗೊಂದು ಉಪಯುಕ್ತ ಮಾಹಿತಿ ಇಲ್ಲಿದೆ!
