Home » Kadaba: ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

Kadaba: ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

by Praveen Chennavara
0 comments
Daiva nartaka

Daiva nartaka : ಮಂಗಳೂರು:  ದೈವ ನರ್ತಕರೊಬ್ಬರು ದೈವದ (Daiva nartaka) ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ.30 ರಂದು  ಕಾಣಿಯೂರು ಗ್ರಾ.ಪಂ.ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ವರದಿಯಾಗಿದೆ.

ದೈವ ನರ್ತಕರಾದ ಕಾಂತು ಅಜಿಲ ಮಾಲೆಂಗ್ರಿ ಮೃತಪಟ್ಟವರು. ಕಾಂತು ಅಜಿಲ ಅವರು ಹಲವು ವರ್ಷಗಳಿಂದ  ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ಕಾಣಿಯೂರು ಗ್ರಾ.ಪಂ.ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೋತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

You may also like

Leave a Comment