Home » Rahul Gandhi : ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ! ಶಿಕ್ಷೆಯೊಂದಿಗೆ ಅನರ್ಹತೆ ರದ್ಧಾಗುತ್ತಾ ಇಲ್ಲ ಸಿಂಧುವಾಗುತ್ತಾ?

Rahul Gandhi : ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ! ಶಿಕ್ಷೆಯೊಂದಿಗೆ ಅನರ್ಹತೆ ರದ್ಧಾಗುತ್ತಾ ಇಲ್ಲ ಸಿಂಧುವಾಗುತ್ತಾ?

by ಹೊಸಕನ್ನಡ
1 comment
Rahul Gandhi

Rahul Gandhi jail sentence : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸಂತ್ತಿನಿಂದಲೂ ಅನರ್ಹಗೊಂಡ ಹಿನ್ನೆಲೆಯಲ್ಲಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್‌ ನ್ಯಾಯಾಲಯ ಇಂದು(ಏಪ್ರಿಲ್ 13 ಗುರುವಾರ) ನಡೆಸಲಿದೆ. ಹೀಗಾಗಿ ಇಡೀ ದೇಶದ ಚಿತ್ತ ಸೂರತ್ ನ್ಯಾಯಾಲಯದತ್ತ ಎಂಬಂತಾಗಿದೆ.

ಹೌದು, ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್‌ ನ್ಯಾಯಾಲಯ ಇಂದು ನಡೆಸಲಿದೆ. ಒಂದು ವೇಳೆ ಆಕ್ಷೇಪಣಾ ಅರ್ಜಿ ವಿಚಾರಣೆ ಬಳಿಕ ರಾಹುಲ್‌ ಶಿಕ್ಷೆಗೆ ತಡೆ ನೀಡಿದರೆ, ರಾಹುಲ್‌ ಲೋಕಸಭಾ ಸದಸ್ಯತ್ವದ ಅನರ್ಹತೆಯಿಂದ ತಕ್ಷಣಕ್ಕೆ ಪಾರಾಗುತ್ತಾರೆ. ಹೀಗಾಗಿ ಗುರುವಾರದ ಕೋರ್ಟ್‌ ನಡೆ ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ ಏಪ್ರಿಲ್‌ 13ರವರೆಗೆ ರಾಹುಲ್‌ ಗಾಂಧಿಗೆ ಜಾಮೀನು ನೀಡಲಾಗಿದ್ದು, ಅದನ್ನು ವಿಸ್ತರಿಸುತ್ತದೆಯೋ ಇಲ್ಲವೋ ಎಂಬುದು ಕೂಡಾ ಕುತೂಹಲಕಾರಿಯಾಗಿದೆ.

ಈ ನಡುವೆ ರಾಹುಲ್‌ (Rahul Gandhi jail sentence)  ಶಿಕ್ಷೆಗೆ ತಡೆ ನೀಡುವುದಕ್ಕೆ ಆಕ್ಷೇಪಣೆ ಸಲ್ಲಿಸಿರುವ ಪೂರ್ಣೇಶ್‌ ಮೋದಿ, ರಾಹುಲ್‌ ಗಾಂಧಿ ಪದೇ ಪದೇ ತಪ್ಪು ಮಾಡುತ್ತಿದ್ದಾರೆ. ಮಾನಹಾನಿಯಾಗುವಂತೆ ಮಾತಾನಾಡುವುದನ್ನು ಅವರು ಹವ್ಯಾಸ ಮಾಡಿಕೊಂಡಂತಿದೆ ಎಂದು ಹೇಳಿದ್ದಾರೆ. ಅಲ್ಲದೇ ಶಿಕ್ಷೆ ನೀಡುವ ಸಮಯದಲ್ಲಿ ನ್ಯಾಯಾಧೀಶರು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು, ವಾಕ್‌ ಸ್ವಾತಂತ್ರ್ಯದ ಹೆಸರಿನಲ್ಲಿ ಬಾಯಿಗೆ ಬಂದಂತೆ ಮಾತನಾಡುವುದಕ್ಕೆ ಕಡಿವಾಣ ಹಾಕಬೇಕು. ಹಾಗಾಗಿ ರಾಹುಲ್‌ ಗಾಂಧಿ ಶಿಕ್ಷೆಗೆ ತಡೆ ನೀಡಬಾರದು ಎಂದು ಕೋರಿದ್ದಾರೆ.

 

ಕೋಲಾರದಲ್ಲಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಕಳ್ಳರೆಲ್ಲರೂ ಮೋದಿ ಸರ್‌ನೇಮ್ ಹೊಂದಿರುವುದು ಹೇಗೆ?’ ಎಂದು ವ್ಯಂಗ್ಯವಾಡಿದ್ದರು. ಇದರ ವಿರುದ್ಧ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್‌ನಲ್ಲಿ ದೂರು ದಾಖಲಿಸಿದ್ದರು. ಈ ಕುರಿತಂತೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಶಿಕ್ಷೆಯ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ವಯನಾಡು ಲೋಕಸಭೆ ಕ್ಷೇತ್ರದ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

 

ಇದನ್ನು ಓದಿ : Actress Samantha Health : ನಟಿ ಸಮಂತಾ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!!! ಧ್ವನಿ ಕಳೆದುಕೊಂಡ ನಟಿ 

You may also like

Leave a Comment