Home » PM Kisan: ಪಿಎಂ ಕಿಸಾನ್ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಕೇಂದ್ರ ಸರ್ಕಾರ !

PM Kisan: ಪಿಎಂ ಕಿಸಾನ್ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಕೇಂದ್ರ ಸರ್ಕಾರ !

0 comments
PM Kisan

PM-Kisan Samman Nidhi scheme : ಕೇಂದ್ರ ಸರ್ಕಾರ (Government ) ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯು ರೈತರ ಉನ್ನತಿಗಾಗಿ ಭಾರತ ಸರ್ಕಾರ ನಡೆಸುತ್ತಿರುವ ಪ್ರಮುಖ ಯೋಜನೆಯಾಗಿದೆ. ಈಗಾಗಲೇ 2018ರಲ್ಲಿ ಆರಂಭವಾದ ಈ ಯೋಜನೆಯಡಿ, ಪಿಎಂ ಕಿಸಾನ್ ನಿಧಿಯಿಂದ (PM-Kisan Samman Nidhi scheme) ದೇಶದ ಕೋಟಿಗಟ್ಟಲೆ ರೈತರು ಪ್ರಯೋಜನ ಪಡೆಯುತ್ತಿದ್ದಾರೆ.

ಇದೀಗ ರೈತರನ್ನು ಆರ್ಥಿಕವಾಗಿ ಮತ್ತಷ್ಟು ಬಲಪಡಿಸುವ ಸಲುವಾಗಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೇಂದ್ರಾಡಳಿತ ಪ್ರದೇಶಗಳಿಗೆ (UTs) PM-KISAN ಸೇರಿದಂತೆ ಎಲ್ಲಾ ಕೇಂದ್ರೀಯ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಸೂಚಿಸಿದ್ದಾರೆ.
ರೈತರು ಎಲ್ಲಾ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ .

ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಉದ್ದೇಶಕ್ಕಾಗಿ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ತೋಮರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಕೇಂದ್ರಾಡಳಿತ ಪ್ರದೇಶಗಳಲ್ಲೂ ಸರಕಾರದ ಈ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನಗೊಳಿಸಬೇಕು. ಅಲ್ಲಿನ ಎಲ್ಲ ರೈತರಿಗೂ ಕಲ್ಯಾಣ ಯೋಜನೆಗಳ ಲಾಭ ಸಿಗಬೇಕು. ಎಲ್ಲಾ ಅರ್ಹ ರೈತರು, ಪಶುಸಂಗೋಪನೆ ಮತ್ತು ಮೀನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ (KCC ) ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ಇತರ ಯೋಜನೆಗಳ ಪ್ರಯೋಜನವನ್ನು ಪಡೆಯಬೇಕು ಎಂದು ಈ ಮೇಲಿನ ಅಧಿಕೃತ ಹೇಳಿಕೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.

ಅದಲ್ಲದೆ “ಅಭಿವೃದ್ಧಿಯ ಉದ್ದೇಶದಿಂದ ಕೇಂದ್ರಾಡಳಿತ ಪ್ರದೇಶಗಳ ಸಣ್ಣ ರೈತರ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಬೇಕು. ಮುಖ್ಯವಾಗಿ ಕೇಂದ್ರ ಸರ್ಕಾರದ ಬಳಿ ಯಾವುದೇ ಯೋಜನೆಗಳು ಮತ್ತು ಬಜೆಟ್ ಕೊರತೆ ಇಲ್ಲ, ಆದರೆ ಯೋಜನೆಗಳ ಸಂಪೂರ್ಣ ಅನುಷ್ಠಾನದ ಪ್ರಮುಖ ಅಗತ್ಯವಿದೆ” ಎಂದು ಸಚಿವರು ಹೇಳಿದರು.

ಒಟ್ಟಿನಲ್ಲಿ ರೈತರು ಎಲ್ಲಾ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಆರ್ಥಿಕವಾಗಿ ಸದೃಢರಾಗಬೇಕು ಎಂಬ ಮೂಲ ಉದ್ದೇಶವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Government Portal: ಇನ್ನು ಸಿಗಲಿದೆ ಈ ಎಲ್ಲಾ ದಾಖಲೆ ಒಂದೇ ವೆಬ್‌ಸೈಟ್‌ನಲ್ಲಿ! ಯಾವೆಲ್ಲ ದಾಖಲೆ ಸಿಗಲಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ!

You may also like

Leave a Comment