Home » FIRE: ಮನೆಗೆ ತಗುಲಿದ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಹೋದರಿಯರ ಸಜೀವ ದಹನ!

FIRE: ಮನೆಗೆ ತಗುಲಿದ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಹೋದರಿಯರ ಸಜೀವ ದಹನ!

0 comments
Fire accident

Fire Accident : ಬೆಂಕಿಯ ಜ್ವಾಲೆಗೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನವಾದ ಘಟನೆ (Fire Accident) ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ವಿಧಿ ಎಷ್ಟು ಕ್ರೂರಿ ಎನ್ನುವಷ್ಟು ದೊಡ್ಡ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಊರೇ ಬಿಕೋ ಅನ್ನುತ್ತಿದೆ.

ಮಾಹಿತಿ ಪ್ರಕಾರ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮದಯಾಳು ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ನರೇಶ್ ರಾಮ್ ಎಂಬಾತನ ಪುತ್ರಿಯರಾದ ಸೋನಿ ಕುಮಾರಿ (12), ಶಿವಾನಿ ಕುಮಾರಿ (8), ಅಮೃತಾ ಕುಮಾರಿ (5) ಮತ್ತು ರೀಟಾ ಕುಮಾರಿ (3) ಮೃತರು. ಹುಡುಗಿಯರು ಮಲಗಿದ್ದಾಗ ಅವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಒಳಗಿದ್ದರು ಎಂಬ ಮಾಹಿತಿ ದೊರೆತಿದೆ.

ಸದರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, “ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಾವನ್ನಪ್ಪಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಸದ್ಯ ಈ ದುರ್ಘಟನೆಯಲ್ಲಿ ಏಳು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲೆಯ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗಾಗಲೇ ನಾಲ್ವರು ಅಪ್ರಾಪ್ತ ಬಾಲಕಿಯರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಂತರ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ಇದನ್ನೂ ಓದಿ:Congress Manifesto 2023: ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಲಿಸ್ಟ್‌

You may also like

Leave a Comment