Home » ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

0 comments
Karnataka new CM Siddaramaiha

Karnataka new CM Siddaramaiha : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Karnataka new CM Siddaramaiha) , ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಸಿದ್ಧರಾಮಯ್ಯ ಅವರು 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು.ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

 

ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕ ಪ್ರಿಯಾಂಕಾ ವಾದ್ರಾ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‍ಘಡ ಸಿಎಂ ಭೂಪೇಶ್ ಬಘೇಲ್, ಹಿಮಾಚಲ ಸಿಎಂ ಸುಖ್ವಿಂದರ್ ಸುಕ್ಕು, ಬಿಹಾರ ಸಿಎಂ ನಿತೀಶ್ ಕುಮಾರ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: Rs 2,000 Notes From Circulation: 2000 ನೋಟು ಬ್ಯಾನ್ ವಿಚಾರದಲ್ಲಿ ಗೊಂದಲ ಆಗುತ್ತಿದೆಯೇ? ಹಾಗಿದ್ರೆ ಚಿಂತೆ ಬೇಡ, ನಿಮ್ಮ ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ!

You may also like

Leave a Comment