Randeep Singh Surjewala: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆ ಯಾರು ಅನಗತ್ಯ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆ ಮೇ.10ರಂದು ನಡೆದಿದ್ದು, ಮೇ, 13ರಂದು ಫಲಿತಾಂಶ ಹೊರಬಿದ್ದಿದ್ದು, ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವನ್ನು ಸಾಧಿಸಿದ ಬೆನ್ನಲ್ಲೆ ಸಿಎಂ ಹುದ್ದೆಗಾಗಿ ಫೈಟ್ ನಡೆದಿತ್ತು, ಆಗ ಹೈಕಮಾಂಡ್ ಅದೇಶ ಮೆರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಎಂದು ಘೋಷಣೆ ಮಾಡಿದ ಬೆನ್ನಲ್ಲೆ ಮೇ.20ರಂದು ಪ್ರಮಾಣವಚನ ಸ್ವೀಕಾರ ನಡೆಸಿದ ಅಧಿಕೃತವಾಗಿ ಅಧಿಕಾರವನ್ನು ವಹಿಸಿದ್ದರು. ಸಿದ್ದರಾಮಯ್ಯ ಐದು ವರ್ಷಮುಖ್ಯಮಂತ್ರಿಯಾಗಿರುತ್ತಾರೆ ಎಂದು ಮೈಸೂರಿನಲ್ಕಿ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ದೊಡ್ಡ ಕಂಪನ ಸೃಷ್ಟಿಯಾಗಿದೆ. ಈ ರೀತಿಯ ಹೇಳಿಕೆಗೆ ಯಾರು ಉತ್ತರವನ್ನು ನೀಡಬಹುದು ಆದರೆ ಹಾಗೆ ಮಾಡದಿರಲು ನಿರ್ಧರಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಪಾಟೀಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪರಿಗಣಿಸಿ, ಯಾರೂ ಕೂಡ ಅನಗತ್ಯ ಹೇಳಿಕೆ ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ. ಇದರ ಕಡೆಗೆ ಗಮನ ಕೊಡಬೇಕು ಖಡಕ್ ವಾರ್ನಿಂಗ್ ನೀಡಿದ್ದಾರೆ..
ಇದನ್ನು ಓದಿ: C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
