ರೈನ್ ಅಲರ್ಟ್: ಭಾರತೀಯ ಹವಾಮಾನ ಇಲಾಖೆಯು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ (ಮಳೆ ಎಚ್ಚರಿಕೆ) ನೀಡಿದೆ.
ಹೌದು, ರಾಜ್ಯದಲ್ಲಿ ವರುಣನ ಅಬ್ಬರ ಪ್ರಾರಂಭವಾಗಿದ್ದು, ಈ ಮೂರು ದಿನಗಳ ಕಾಲ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 27 ಮೇ 2023ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮಾಹಿತಿ ನೀಡಿದೆ. ಜೊತೆಗೆ ಕೆಲವು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಅನ್ನು ಕೂಡ ಘೋಷಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಈ ಜಿಲ್ಲೆಗಳಲ್ಲಿ “ಯಲ್ಲೋ ಅಲರ್ಟ್” ಎಂದು ಪ್ರಕಟಿಸಲಾಗಿದೆ.
ಸದ್ಯ ಮೇ 24 ರಿಂದ 26 ರವರೆಗೆ ಕರಾವಳಿ ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ನಿರೀಕ್ಷೆಯಿದೆ. ಇಂದು (ಬುಧವಾರ, ಮೇ 24 ರಂದು) ಕರಾವಳಿ ಕರ್ನಾಟಕದಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ, ಗಾಳಿಯ ವೇಗ ಗಂಟೆಗೆ 40-50 ಕಿಮೀ ವೇಗವನ್ನು ತಲುಪಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಕರಾವಳಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಜನರು ಪರದಾಡುವಂತೆ ಆಗಿದೆ. ಈ ಹಿನ್ನೆಲೆ ಮಳೆಯಿಂದಾಗಿ ಯಾವುದೇ ರೀತಿಯ ತೊಂದರೆಯನ್ನು ತಡೆಗೋಡೆ ಸಂಪರ್ಕ ಹೆಲ್ಪ್ ಲೈನ್‌ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: 2023-24ರ ವಾರ್ಷಿಕೋತ್ಸವಗಳ ಪಟ್ಟಿ: ಸರ್ಕಾರದಿಂದ 2023-24ನೇ ಸಾಲಿನ ಜಯಂತಿಗಳ ಪಟ್ಟಿ ಬಿಡುಗಡೆ!
