Election Announcement: ಬೆಂಗಳೂರು: ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ಘೋಷಣೆಗೆ( Election Announcement) ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದ್ದು,ಜೂನ್ 4ರವರೆಗೆ ಈ ಕಾರ್ಯ ನಡೆಯಲಿದೆ.
ಜೂನ್ 5 ರಿಂದ 13 ರವರೆಗೆ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ನಡೆಯಲಿದ್ದು, ಜೂನ್ 14ರಿಂದ ಕರಡು ಮತದಾರರ ಪಟ್ಟಿ ಪ್ರಕಟಣೆ,ಜೂನ್ 22 ರಂದು ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನವಾಗಿದೆ. ಮತ್ತೊಮ್ಮೆ ಪರಿಶೀಲನೆ ಕಾರ್ಯ ಜೂನ್ 25ರಂದು ನಡೆಸಲಾಗುವುದು. ಜೂನ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಜುಲೈ ಎರಡನೇ ವಾರದಲ್ಲಿ ಜಿ.ಪಂ., ತಾ.ಪಂ. ಚುನಾವಣೆ ನಡೆಯುವ ಸಾಧ್ಯತೆ ಇದೆ.
ಇದನ್ನು ಓದಿ: Bengaluru: ಶಾದಿ.ಕಾಮ್’ನಲ್ಲಿ ಪರಿಚಯ ; ಮದುವೆಯ ನಾಟಕವಾಡಿ ಓಯೋದಲ್ಲಿ ಮಜಾ ; ಮುಂದೇನಾಯ್ತು ಗೊತ್ತಾ?
