8
Accident: ಮೈಸೂರಿನ ಟಿ.ನರಸೀಪುರದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು 10 ಮಂದಿ ಕೊನೆ ಉಸಿರೆಳೆದಿದ್ದಾರೆ.
ಖಾಸಗಿ ಬಸ್ ಮತ್ತು ಕಾರ್ ನಡುವೆ ಕುರುಬೂರು ಬಳಿ ಈ ಘೋರ ದುರಂತ ಸಂಭವಿಸಿದ್ದು, ಇನ್ನೋವಾ ಕಾರಿನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದು, ಅದರಲ್ಲಿ 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬಸ್ ಡಿಕ್ಕಿ ಆಗಿರುವ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಬಸ್ಸಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರು ಸಾವು ಬದುಕಿನ ನಡುವೆ ಇರುವುದಾಗಿ ಮಾಹಿತಿ ದೊರೆತಿದೆ. ಈ ಹಿನ್ನೆಲೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಅಪಘಾತದ ವೇಳೆ ಸ್ಥಳೀಯರ ರಕ್ಷಣೆಗೆ ಧಾವಿಸಿದ್ದು, ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದಿದ್ದು, ವಿಚಾರಣೆ ನಂತರ ಅಪಘಾತದ ನಿಖರ ಕಾರಣ ತಿಳಿದು ಬರಬೇಕಿದೆ.
