Home » ಕಡಬ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ ,ಸಂಚಾರ ಅಸ್ತವ್ಯಸ್ತ

ಕಡಬ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ ,ಸಂಚಾರ ಅಸ್ತವ್ಯಸ್ತ

by Praveen Chennavara
0 comments
Kadaba

Kadaba : ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ಕಡಬ (kadaba) ತಾಲೂಕಿನ ನೆಟ್ಟಣದಲ್ಲಿ  ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದ್ದು,ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ.

ನೆಟ್ಟಣದ ಕೇಂದ್ರೀಯ ನಾಟಾ ಸಂಗ್ರಹ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ.

ಪೊಲೀಸ್‌, ಅರಣ್ಯ, ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ, ಸ್ಥಳೀಯಾಡಳಿತ, ಸ್ಥಳೀಯರ ನೆರವಿನಿಂದ ಮರಗಳ ತೆರವು ಕಾರ್ಯ ನಡೆಸಲಾಗಿದೆ. ತೆರವಿಗೆ ಹರಸಾಹಸ ಪಡಬೇಕಾಯಿತು. ಹಾನಿಗೊಂಡ ಕಾರು ಸುಬ್ರಹ್ಮಣ್ಯ ,ಧರ್ಮಸ್ಥಳ ಯಾತ್ರೆ ಮಾಡಲು ಬಂದಿದ್ದ ಯಾತ್ರಿಕರದ್ದು ಎಂದು ತಿಳಿದುಬಂದಿದೆ.ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Shivamogga News: ಮುಸ್ಲಿಂ ಯುವಕರ ತಂಡದಿಂದ ಹಿಂದೂ ಯುವಕನಿಗೆ ಹಲ್ಲೆ! ಬೈಕ್‌ನಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್‌ ನೀಡಿದ್ದೇ ಮೂಲ ಕಾರಣ?!

You may also like

Leave a Comment