6
ಬೆಳಗಾವಿ : ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ತಾಂತ್ರಿಕ ಸಮಸ್ಯೆಯಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶಗೊಂಡಿದೆ ಎಂದು ವರದಿಯಾಗಿದೆ.
ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ತರಬೇತುದಾರನ ಕಾಲಿಗೆ ಗಂಭೀರ ಗಾಯವಾಗಿದೆ. ಕೂಡಲೇ ಚಿಕಿತ್ಸೆ ನೀಡಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
