G Parameshwar: ಕರ್ನಾಟಕದಲ್ಲಿ ಶಾಂತಿಯನ್ನು ಕದಡುವ ಕೆಲಸ ಮಾಡಿದ್ರೆ ನಾವು ಬಜರಂಗದಳ ಸಂಘಟನೆಯನ್ನೇ ನಿಷೇಧ ಮಾಡುತ್ತೇವೆಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿ, ಕಾಂಗ್ರೆಸ್ ಐದು ಗ್ಯಾರಂಟಿಗಳ ವಿಚಾರವಾಗಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗಲಾಟೆಗಳು ಹೆಚ್ಚಾಗುತ್ತಿರೋದನ್ನು ಉದ್ದೇಶವನ್ನಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ ಎಂದಿದ್ದಾರೆ. ಅಲ್ಲದೇ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಬಜರಂಗದಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಅಂತಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಇದನ್ನು ಓದಿ: White Crow: ನೀವು ಬಳಿ ಕಾಗೆ ನೋಡಿದ್ದೀರಾ? ಅಪರೂಪಕ್ಕೆ ಕಾಣಿಸಿಕೊಳ್ಳುವ ಬಿಳಿ ಕಾಗೆಯಿಂದ ದೇಶಕ್ಕೆ ಕಾದಿದೆಯಾ ಗಂಡಾಂತರ?
