H C Mahadevappa: ಶಾಲೆಗಳಲ್ಲಿ ಇನ್ನುಮುಂದೆ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
ಹೌದು, ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ.
ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಬೇಕು. ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ(School, collages and university)ಪ್ರತಿದಿನ ಪ್ರಸ್ತಾವನೆ ಓದಬೇಕು. ಇದಕ್ಕಾಗಿ ಪ್ರತ್ಯೇಕ ಆದೇಶ ಹೊರಡಿಸಬೇಕು ಎಂದು ತಿಳಿಸಿದ್ದಾರೆ.
‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು(HC mahadevappa) ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಲಾಗಿದೆ.
ಅಲ್ಲದೆ ಪರಿಶಿಷ್ಟ ಜಾತಿ, ಪಂಗಡಗಳು(SC,ST) ಮತ್ತು ಹಿಂದುಳಿದ ವರ್ಗದ(OBC) ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಿಲ್ಲ ಎಂಬ ಕಾರಣಕ್ಕೆ ಶಾಲಾ–ಕಾಲೇಜುಗಳ ಪ್ರವೇಶ ನೀಡುವುದಕ್ಕೆ ಅಡ್ಡಿ ಪಡಿಸುವಂತಿಲ್ಲ. ಮೊದಲಿಗೆ ಪ್ರವೇಶ ನೀಡಬೇಕು ಎಂದು ಮಹದೇವಪ್ಪ ತಿಳಿಸಿದರು.
ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ https://t.co/3JYWV5DEzc
— Dr H.C.Mahadevappa (@CMahadevappa) June 1, 2023
ಇದನ್ನು ಓದಿ: Anekal News: ಕೈ ಕಾಲು ರುಂಡವಿಲ್ಲದ ಮಹಿಳೆ ಶವ; ಗಾಬರಿಗೊಂಡ ಜನ!
