Home » ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ಅಪಾರ ಸಾವು ,ನೋವು ಶಂಕೆ

ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ಅಪಾರ ಸಾವು ,ನೋವು ಶಂಕೆ

by Praveen Chennavara
0 comments
Odisha accident

ಒಡಿಶಾ ಅಪಘಾತ, ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾ ಮುಖಿ ಡಿಕ್ಕಿ (ಒಡಿಶಾ ಅಪಘಾತ) ಹೊಡೆದಿದ್ದು, ಅಪಾರ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ 50 ಜನ ಸಾವನ್ನಪ್ಪಿದ್ದಾರೆ. ಒಟ್ಟು 180 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಒಟ್ಟು ಮೂರು ಟ್ರೈನ್ ಗಳು ಡಿಕ್ಕಿ ಹೊಡೆದುಕೊಂಡು ಈ ಅಪಘಾತ ಸಂಭವಿಸಿದೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಅದರ ಜತೆಗೆ ಬೆಂಗಳೂರಿನಿಂದ ಹೊರಟ ಯಶವಂತಪುರ ಟು ಹೌರಾ ರೈಲು ಕೂಡ ಅಪಘಾತಕ್ಕೆ ಈಡಾಗಿವೆ. ಇದರ ನಾಲ್ಕು ಬೋಗಿಗಳು ಹಳಿ ತಪ್ಪಿ ಬಿದ್ದಿದೆ.

ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಘಟನಾ ಸ್ಥಳಕ್ಕೆ 50 ಕ್ಕೂ ಹೆಚ್ಚು ಆಂಬುಲೆನ್ಸ್ ಅನ್ನು ರವಾನಿಸಲಾಗಿದೆ.

You may also like

Leave a Comment