Home » Jawaan Movie: ದಾಖಲೆಯ ಮೊತ್ತಕ್ಕೆ ಮಾರಾಟವಾಯ್ತು ‘ ಜವಾನ್ ‘ ಚಿತ್ರದ ಓಟಿಟಿ ಮತ್ತು ಸ್ಯಾಟಲೈಟ್ ಹಕ್ಕು; ಚಿತ್ರದ ಹೀರೋ ನೋಡಿ ದುಡ್ಡು ಸುರಿದ್ರಾ ?

Jawaan Movie: ದಾಖಲೆಯ ಮೊತ್ತಕ್ಕೆ ಮಾರಾಟವಾಯ್ತು ‘ ಜವಾನ್ ‘ ಚಿತ್ರದ ಓಟಿಟಿ ಮತ್ತು ಸ್ಯಾಟಲೈಟ್ ಹಕ್ಕು; ಚಿತ್ರದ ಹೀರೋ ನೋಡಿ ದುಡ್ಡು ಸುರಿದ್ರಾ ?

by Mallika
0 comments

Jawaan Movie: ಶಾರುಖ್ ಖಾನ್ (Shah Rukh Khan) ಅಭಿನಯದ ‘ಪಠಾಣ್’ (Pathaan) ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಪಠಾಣ್ ಸಿನಿಮಾ ಯಶಸ್ಸಿನ ಬಳಿಕ ನಟ ಶಾರುಖ್ ಖಾನ್ ಜವಾನ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ (Jawaan Movie) ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಸೃಷ್ಟಿಯಾಗಿವೆ.

 

ಸದ್ಯ ಬಾಲಿವುಡ್ ಕಿಂಗ್ ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳಲು ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದೆ. ಅಷ್ಟೇ ಅಲ್ಲ, ಜವಾನ್ ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದೆ ಎನ್ನಲಾಗುತ್ತಿದೆ.

 

‘ಜವಾನ್’ ಚಿತ್ರದ ಓಟಿಟಿ, ಸ್ಯಾಟಿಲೈಟ್ ಮತ್ತು ಸಂಗೀತ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿದೆ. ಭಾರೀ ಮೊತ್ತಕ್ಕೆ ಹಕ್ಕುಗಳನ್ನು ಕೊಂಡುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಚಿತ್ರತಂಡದಿಂದ ಮಾರಾಟದ ಬೆಲೆ ಬಹಿರಂಗವಾಗಿಲ್ಲ. ಇನ್ನು ಜವಾನ್ ಸಿನಿಮಾವನ್ನು ಸೆಪ್ಟೆಂಬರ್ 7 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

 

ತಮಿಳು ನಿರ್ದೇಶಕ ಅಟ್ಲಿ ಅವರು ಶಾರುಖ್ ಖಾನ್ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಶಾರುಖ್ ಖಾನ್​ ಜೋಡಿಯಾಗಿ ನಟಿ ನಯನತಾರಾ ನಟಿಸುತ್ತಿದ್ದಾರೆ. ತಮಿಳು ನಟ ವಿಜಯ್ ಸೇತುಪತಿ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜವಾನ್ ಸಿನಿಮಾ ಬಗ್ಗೆ ಕಿಂಗ್ ಖಾನ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇದೆ. ಪಠಾಣ್ ಸಿನಿಮಾ ರೀತಿ ಜವಾನ್ ಕೂಡ ಶಾರುಖ್ ಹಿಟ್ ಸಿನಿಮಾ ಲಿಸ್ಟ್​ಗೆ ಸೇರುತ್ತಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ : ಖ್ಯಾತ ಪೋಷಕ ನಟ, ನಿರ್ದೇಶಕ ಶರಣ್ ರಾಜ್ ವಿಧಿವಶ

You may also like

Leave a Comment