Murdeshwar beach: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ (Murdeshwar beach) ಇಂಜಿನಿಯರಿಂಗ್ ವಿದ್ಯಾರ್ಥಿ ಈಜಲು ತೆರಳಿ ಸಮುದ್ರಪಾಲಾದ ಅಘಾತಕಾರಿ ಘಟನೆಯೊಂದು ನಡೆದಿದೆ.
ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ‘ಬಿಪೊರ್ ಜಾಯ್’ ಚಂಡಮಾರುತ ಅಬ್ಬರ ಜೋರಾಗಿದ್ದು ಈ ನಡುವೆ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದ್ದರೂ, ಸಮುದ್ರದಲ್ಲಿ ಎಗ್ಗಿಲ್ಲದೇ ಆಟವಾಡೋದಕ್ಕೆ ತೆರಳಿದ ಆರು ಯುವಕರಲ್ಲಿ ಮೂವರು ಬಾಲಕರು ನೀರು ಪಾಲಾಗುತ್ತಿದ್ದಂತೆ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.
ಅಲ್ಲದೇ ಓರ್ವ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಯಲಾಗಿದೆ. ಮೃತಪಟ್ಟ ಯುವಕ ಬೆಂಗಳೂರು ಮೂಲದ ಪವನ್ ನಾಯ್ಕ(20) ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಮುರ್ಡೇಶ್ವರಕ್ಕೆ 6 ಸ್ನೇಹಿತರು ಪ್ರವಾಸಕ್ಕೆಂದು ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Sushanth Singh Rajput Death Anniversary: ಬಾಲಿವುಡ್ ನಟ ಸುಶಾಂತ್ ಸಿಂಗ್ ನಮ್ಮೊಂದಿಗೆ ಇಲ್ಲದೆ ಇಂದಿಗೆ ಮೂರು ವರ್ಷ!
