SBI RBO Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (SBI RBO Recruitment 2023). ಒಟ್ಟು 194 ನಿವೃತ್ತ ಬ್ಯಾಂಕ್ ಆಫೀಸರ್ ಹುದ್ದೆಗಳು ಖಾಲಿ ಇದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ಹೆಸರು & ಸಂಖ್ಯೆ:-
FLC ಕೌನ್ಸಿಲರ್‌ಗಳು: 182
FLC ನಿರ್ದೇಶಕರು: 12
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಜೂನ್ 15, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 6, 2023
ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಿ.
ವಯೋಮಿತಿ : ಕನಿಷ್ಟ 60 ವರ್ಷ ಹಾಗೂ ಗರಿಷ್ಟ 63 ವರ್ಷ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಎಸ್‌ಬಿಐ ಅಧಿಕೃತ ಸೈಟ್ sbi.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
