4
Women death: ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿರುವ (Women death) ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮಾಮಣಿ (60) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಗ್ಯಾಸ್ ಆನ್ ಮಾಡಿ ಅಡುಗೆ ಮಾಡಲು ಮುಂದಾಗಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಬೆಂಕಿ ಜ್ವಾಲೆ ವ್ಯಾಪಿಸಿ ರಮಾಮಣಿ ಮತ್ತು ಮನೆ ಕೆಲಸದ ಮಹಿಳೆ ಲಕ್ಷ್ಮಮ್ಮ ಅವರಿಗೆ ಬೆಂಕಿ ತಗುಲಿದೆ.
ಬೆಂಕಿ ಕಂಡ ತಕ್ಷಣವೇ ಸ್ಥಳೀಯರು ಮನೆಗೆ ಧಾವಿಸಿ ಬೆಂಕಿಯನ್ನು ನಂದಿಸಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಮಾಮಣಿ ಮೃತಪಟ್ಟಿದ್ದಾರೆ. ಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನಡೆಯುತ್ತಿದೆ.
ಇದನ್ನೂ ಓದಿ: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 11,000 ರೂಪಾಯಿ ನಗದು ಬಹುಮಾನ- ಸಂಘಟನೆ
