Home » Dakshina kannada: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಕುಟುಂಬಸ್ಥರಿಂದ ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಮನವಿ!

Dakshina kannada: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಕುಟುಂಬಸ್ಥರಿಂದ ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಮನವಿ!

by Mallika
0 comments

Dakshina kannada: ಸುಮಾರು 11 ವರ್ಷಗಳ ಕಾಲ ರಾಷ್ಟ್ರ ಮಟ್ಟದಲ್ಲಿ ಬಹಳ ಸುದ್ದಿಮಾಡಿ ಇಡೀ ದೇಶವೇ ದಕ್ಷಿಣ ಕನ್ನಡ ಜಿಲ್ಲೆಯ(Dakshina kannada) ಕುಗ್ರಾಮದತ್ತ ತಿರುಗಿನೋಡುವಂತೆ ಮಾಡಿದ್ದ ಉಜಿರೆ ಎಸ್ ಡಿ ಎಂ ಕಾಲೇಜು(Ujire SDM collage) ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ(Sowjanya rape case) ಹಾಗೂ ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಇದೀಗ ಸೌಜನ್ಯ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಗೆ ಮುಂದಾಗಿದ್ದಾರೆ.

ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ತೀರ್ಪು ಪ್ರಕಟವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದ ದೋಷಮುಕ್ತ ಎಂದು ಸಿಬಿಐ ನ್ಯಾಯಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ. ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಇದೀಗ, ಸೌಜನ್ಯ ಕುಟುಂಬಸ್ಥರು ಈ ಪ್ರಕರಣದ ಮರು ತನಿಖೆಗೆ ಮುಂದಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ, ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಸಿಒಡಿ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಪ್ರಕರಣವನ್ನು ದುರ್ಬಲಗೊಳಿಸಲು “ಪ್ರಬಲ” ಜನರಿಂದ ಏಜೆನ್ಸಿಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದಾರೆ. ಸಂತೋಷ್ ರಾವ್ ಪ್ರಮುಖ ಆರೋಪಿ ಅಲ್ಲ. ಇತ್ತೀಚೆಗೆ ಸಿಬಿಐ ನ್ಯಾಯಾಲಯದ ತೀರ್ಪು ಅದನ್ನು ಸಾಬೀತುಪಡಿಸಿದೆ ತನಿಖಾ ತಂಡಗಳ ಕಡೆಯಿಂದ ಹಲವು ಲೋಪಗಳಾಗಿವೆ’ ಎಂದು ತಿಮರೋಡಿ ಹೇಳಿದರು.

ಧರ್ಮಸ್ಥಳದ ಪ್ರಭಾವಿ ಕುಟುಂಬದ ಕೆಲವರು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರು ಎಲ್ಲಾ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದು, ಕೆಲವು ಪ್ರತ್ಯಕ್ಷದರ್ಶಿಗಳನ್ನು ಹತ್ಯೆಗಯ್ಯಲಾಗಿದೆ. ಅಂದಿನ ತನಿಖಾಧಿಕಾರಿ ಯೋಗೀಶ್ ಕುಮಾರ್ ಸಾಕ್ಷ್ಯ ನಾಶಪಡಿಸುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕಿದ್ದರು. ತನಿಖಾ ಸಂಸ್ಥೆಗಳು ಪ್ರಭಾವಿ ಕುಟುಂಬದ ಕೆಲವರನ್ನು ಡಿಎನ್ಎ ಪರೀಕ್ಷೆಯನ್ನೂ ನಡೆಸಿಲ್ಲ’ ಎಂದು ಅವರು ಆರೋಪಿಸಿದರು. ಧರ್ಮಸ್ಥಳದ ಪ್ರಭಾವಿ ಕುಟುಂಬದ ಸದಸ್ಯರನ್ನು ಸತ್ಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿರುವ ತಿಮರೋಡಿ ಅವರು ಮಾಧ್ಯಮ ಒಂದರಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ, ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ, ಒಕ್ಕಲಿಗ ಸಮುದಾಯದ ಭಕ್ತರು ಪ್ರಕರಣದ ವಿರುದ್ಧ ಹೋರಾಡುವಂತೆ ಮನವಿ ಮಾಡಿದರು. ನ್ಯಾಯವಾದಿ ಅಂಬಿಕಾ ನಾಯಕ್ ಸಭೆಯಲ್ಲಿ ಉಪಸ್ಥಿತರಿದ್ದರು.

You may also like

Leave a Comment